ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು.

ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು ಹಾಗೂ ಅವರ ಬದುಕಿನ ಸವಾಲುಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮವನ್ನು ಆಸಕ್ತಿಯಿಂದ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಪರಿವರ್ತನಾ ದತ್ತಿ ಪ್ರತಿಷ್ಠಾನದ ಅಧ್ಯಕ್ಷೆ ಸಂಜನಾ ಚಲವಾದಿ, ಮಹಾನಗರ ಪಾಲಿಕೆಯ ನಗರ ಅಭಿಯಾನ ವ್ಯವಸ್ಥಾಪಕ ಚಿತ್ತರಂಜನ್ ದಾಸ್, ಡಾ. ನಿತಿನ್ ಚೋಲೈಕರ್, ಅರುಣ ಕುಮಾರಿ, ಗಣೇಶ್, ಅಕ್ಷತಾ, ಪುಷ್ಪ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವು ತೃತೀಯ ಲಿಂಗಿಗಳ ಬಗ್ಗೆ ಸಮಾಜದಲ್ಲಿ ಸಕಾರಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಗಮನ ಸೆಳೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!