ವಿಟ್ಲ, ಜೂನ್ 5: ಶಾಲಾ ಶಿಕ್ಷಣ ಇಲಾಖೆ, ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ – ಪ್ರಾಥಮಿಕ ವಿಭಾಗ ಬಂಟ್ವಾಳ ತಾಲೂಕು ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಉದ್ದೇಶದಿಂದ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ರವಿಶಂಕರ್ ಸಿ. ವಹಿಸಿದ್ದರು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಆಶೋಕ್ ಕುಮಾರ್ ಶೆಟ್ಟಿ ಅವರು ಪ್ರಥಮ ಸಸಿಯನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಮಾನಾಥ ವಿಟ್ಲ, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಅಮೀನ್, ಸದಸ್ಯರಾದ ಹಸೈನಾರ್ ತಾಳಿತ್ತನೂಜಿ ಹಾಗೂ ರವಿವರ್ಮ ವಿಟ್ಲ, ಮುಖ್ಯ ಶಿಕ್ಷಕಿ ವಾರಿಜಾ ಮೇಡಂ, ಶ್ರೀಮತಿ ಟೀಚರ್, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು