ವಿಶ್ವ ಪರಿಸರ ದಿನಾಚರಣೆ: ‘ತಾಯಿಯ ಹೆಸರಲ್ಲಿ ಒಂದು ಗಿಡ’ ಕಾರ್ಯಕ್ಕೆ ಚಾಲನೆ…. !

ಮಂಗಳೂರು:ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮವನ್ನು ಗುರುವಾರ ಶಕ್ತಿನಗರದ ನಲ್ಯಪದವಿನ ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ನಾಯಕರು ಈ ಸಮಯ ನುಡಿದರು .

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಸೇರಿದಂತೆ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಮುಖಂಡರು , ಪಕ್ಷದ ಕಾರ್ಯಕರ್ತರು, ಶಾಲಾ ಪ್ರಮುಖರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!