ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರಾಟ: ಆರೋಪಿ ಬಂಧನ

ಮಂಗಳೂರು : ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹10,40,000 ಮೌಲ್ಯದ 104 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪ್ರಣಾಮ್ ಕೋಟ್ಯಾನ್ ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಹಲ್ಲೆ ಹಾಗೂ ಬೆದರಿಕೆ ಪ್ರಕರಣ, 2026ರಲ್ಲಿ ಮಾದಕವಸ್ತು ಸೇವನೆ ಪ್ರಕರಣ, 2022ರಲ್ಲಿ ಅಬಕಾರಿ ಇಲಾಖೆಯಲ್ಲಿ ಗಾಂಜಾ ಸಂಬಂಧಿತ ಪ್ರಕರಣ ಹಾಗೂ 2022ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!