ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಬಂಟ್ವಾಳ, ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಹಾಗೂ ಮಂಗಳೂರು, ಅಡ್ಯಾರ ಕಣ್ಣೂರಿನ ಕುಂಡಾಲ ಹೌಸ್ ನಿವಾಸಿ ಮೊಹಮ್ಮದ್ ರಾಜೀಕ್ ಬಂಧಿತ ಆರೋಪಿಗಳು.

ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದುದರಿಂದ ನ್ಯಾಯಾಲಯವು ಆರೋಪಿತನ ವಿರುದ್ಧ ವಾರೆಂಟ್ ಹೊರಡಿಸಿತ್ತು.

ಮೊಹಮ್ಮದ್ ರಾಜೀಕ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದುದರಿಂದ ನ್ಯಾಯಾಲಯವು ಆರೋಪಿತನ ವಿರುದ್ಧ ವಾರೆಂಟ್ ಹೊರಡಿಸಿರುತ್ತದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!