ಮಂಗಳೂರು, ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ನಿವಾಸಿ ಕೃಷ್ಣ ನಾಯ್ಕ್ (65) ಅವರು ಕಾಣೆಯಾಗಿದ್ದು, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣ ನಾಯ್ಕ್ ಅವರು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರು ಕಾಣೆಯಾದ ಸಂದರ್ಭದಲ್ಲಿ ಮಿಶ್ರ ಬಣ್ಣದ ಗೆರೆಗಳಿರುವ ಶರ್ಟ್ ಹಾಗೂ ಪ್ಯಾಂಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.