ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು, 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರಿನ ಬೊಂದೇಲ್‌ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಈ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಲ್ಯಾಟರಲ್ ಎಂಟ್ರಿ ಯೋಜನೆಯಡಿ ದ್ವಿತೀಯ ವರ್ಷದ (ಮೂರನೇ ಸೆಮಿಸ್ಟರ್) ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತಿದೆ.

ಎರಡು ವರ್ಷಗಳ ಐಟಿಐ, ದ್ವಿತೀಯ ಪಿಯುಸಿ (ವಿಜ್ಞಾನ) ಅಥವಾ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿನಿಯರು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಬೊಂದೇಲ್‌ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ 0824-2482334, 9611320910 ಹಾಗೂ 9844744845 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!