‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಚಾಲನೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅವರ ಸ್ವಾಗತ ಸಮಾರಂಭದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಯಿತು.

ಜಿಲ್ಲೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಸಮ್ಮುಖದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸ್ಪಂದಿಸಿ ಹಮ್ಮಿಕೊಳ್ಳಲಾದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಚಾಲನೆ ನೀಡಿದರು .

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿಹೇಳಲಾಗಿದ್ದು, ಪ್ರತಿಯೊಬ್ಬರೂ ತಮ್ಮ ತಾಯಿಯ ನೆನಪಿನಲ್ಲಿ ಒಂದು ಗಿಡ ನೆಟ್ಟು ಅದನ್ನು ಪೋಷಿಸುವ ಮೂಲಕ ಹಸಿರು ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಕಿಶೋರ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ , ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹಾಗೂ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ , ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!