ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ ಉಚಿತ ಪುಸ್ತಕ ವಿತರಣೆ

ಮಂಗಳೂರು: ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ 7ನೇ ವರ್ಷದ ಶಾಲಾ ಮಕ್ಕಳ ಉಚಿತ ಪುಸ್ತಕ ವಿತರಣಾ ಸಮಾರಂಭವು ಕುಳಾಯಿಯ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಬಲ ಪೂಜಾರಿ ಕಡಂಬೋಡಿ, ಶಾಸಕ ಡಾ. ಭರತ್ ವೈ. ಶೆಟ್ಟಿ, ಶ್ರೀ ಸತೀಶ್ ಮುಂಚೂರು, ಅರ್ಜುನ್ ಭಂಡಾರ್ಕರ್, ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್ ವಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಗುರುತಿಸಿ ಸೇವ್ ಚಾರಿಟೇಬಲ್ ಲೈಫ್ ಸಂಸ್ಥೆಯ ಅರ್ಜುನ್ ಭಂಡಾರ್ಕರ್ ಅವರನ್ನು ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ ಸನ್ಮಾನಿಸಲಾಯಿತು.

ಬಳಿಕ ಅತಿಥಿಗಳು ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!