ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಎಸ್ಪಿ ಸಿ.ಎ. ಸೈಮನ್ ಅವರು, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಯೊಂದಿಗೆ ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ತೆರಳುತ್ತಿದ್ದರು.
ಈ ವೇಳೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಸಮೀಪ ಇನೋವಾ ಕಾರು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯ ಬಳಿಕ ಗಾಯಾಳುಗಳು ಚಿಕಿತ್ಸೆ ಪಡೆದು, ಕಾರು ಪಲ್ಟಿಯಾದ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಲು ಎಸ್ಪಿ ಸೈಮನ್ ಹಾಗೂ ತಂಡ ಠಾಣೆಗೆ ಭೇಟಿ ನೀಡಿದ್ದಾರೆ.ಘಟನೆಯ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.