ಜೂನ್ 19ರಂದು ಲಯನ್ಸ್ ಸೇವಾ ಸದನದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್‌ಗೆ ಸನ್ಮಾನ

ಮಂಗಳೂರು,: ಲಯನ್ಸ್ ಕ್ಲಬ್‌ನ ಹೆಮ್ಮೆಯ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರಿಗೆ ಲಯನ್ಸ್ ಸದಸ್ಯರ ಪರವಾಗಿ ಸನ್ಮಾನ ಕಾರ್ಯಕ್ರಮವನ್ನು ಜೂನ್ 19ರಂದು ಬೆಳಿಗ್ಗೆ 10.30ಕ್ಕೆ ಅಸೈಗೋಳಿಯ ಲಯನ್ಸ್ ಸೇವಾ ಸದನದಲ್ಲಿ ಆಯೋಜಿಸಲಾಗಿದೆ.

ಲಯನ್ಸ್ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಲಯನ್ಸ್ ಕ್ಲಬ್‌ಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಹಾಗೂ ಮಾಜಿ ರಾಜ್ಯಪಾಲ ದೇವದಾಸ್ ಭಂಡಾರಿ ಮನವಿ ಮಾಡಿದ್ದಾರೆ.

ಈ ಕುರಿತು ಲಯನ್ಸ್ ಜಿಲ್ಲೆಯ ಜಿಲ್ಲಾ ಸಂಪರ್ಕಾಧಿಕಾರಿ ಸುದರ್ಶನ್ ಪಡಿಯಾರ್ ವಿಟ್ಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!