ಪುತ್ತೂರು, ಜೂನ್ 19: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯ ಸಂದರ್ಭದಲ್ಲೇ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಮೊದಲ ಹಂತದ ಸಚಿವ ಸಂಪುಟದಲ್ಲೇ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಮೂಡಿತ್ತು.
ಇದೀಗ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅಶೋಕ್ ರೈ ಅವರಿಗೆ ಪಕ್ಷದ ಹೈಕಮಾಂಡ್‌ನಿಂದ ದೆಹಲಿಗೆ ಬರುವಂತೆ ಸೂಚನೆ ಬಂದಿರುವುದಾಗಿ ತಿಳಿದುಬಂದಿದೆ. ಇದರ ಬೆನ್ನಲ್ಲೇ ಅವರು ಶುಕ್ರವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಚರ್ಚೆಗಳ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ, ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಅಶೋಕ್ ರೈ ಅವರ ಹೆಸರು ಪ್ರಮುಖವಾಗಿ ಪರಿಗಣನೆಯಲ್ಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಅಶೋಕ್ ರೈ ಸಚಿವ ಸಂಪುಟಕ್ಕೆ ಸೇರ್ಪಡೆಯಾದರೆ ಪುತ್ತೂರು ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ನಿರೀಕ್ಷೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಬಹುನಿರೀಕ್ಷಿತ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳು ಶೀಘ್ರಗತಿಯಲ್ಲಿ ಪೂರ್ಣಗೊಳ್ಳುವ ವಿಶ್ವಾಸವನ್ನು ನಾಗರಿಕರು ವ್ಯಕ್ತಪಡಿಸುತ್ತಿದ್ದಾರೆ.
ಆದರೆ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನ ಹಂಚಿಕೆ ಕುರಿತ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಪ್ರಕಟಿಸಿದ ಬಳಿಕವೇ ಸ್ಪಷ್ಟ ಚಿತ್ರಣ ಲಭ್ಯವಾಗ