ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಸಂಸ್ಮರಣ ಕಾರ್ಯಕ್ರಮ

ದೇಶದ ಏಕತೆ ಮತ್ತು ಅಖಂಡತೆಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹಾನ್ ರಾಷ್ಟ್ರಭಕ್ತ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಸಂಸ್ಮರಣ ಕಾರ್ಯಕ್ರಮವು ಮಂಗಳೂರಿನ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜರುಗಿತು.

ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಮೂಡಾದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಅವರು, “ಒಂದೇ ದೇಶದಲ್ಲಿ ಎರಡು ಸಂವಿಧಾನ, ಇಬ್ಬರು ಪ್ರಧಾನಿ ಇರಲು ಸಾಧ್ಯವಿಲ್ಲ ಎಂದು ಸಂಸತ್ತಿನಲ್ಲಿ ಮೊಳಗಿದ ಮುಖರ್ಜಿಯವರ ಸಿಂಹಗರ್ಜನೆ ಭಾರತದ ಇತಿಹಾಸವನ್ನು ಬದಲಿಸಿತು. ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ಪರ್ಮಿಟ್ ವ್ಯವಸ್ಥೆಯನ್ನು ವಿರೋಧಿಸಿ ಅವರು ಮಾಡಿದ ಬಲಿದಾನವೇ ಇಂದು ಕಾಶ್ಮೀರ ಭಾರತದೊಂದಿಗೆ ಸಂಪೂರ್ಣವಾಗಿ ವಿಲೀನಗೊಳ್ಳಲು ಪ್ರೇರಣೆಯಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಧಿ 370 ರದ್ದುಗೊಳಿಸುವ ಮೂಲಕ ಮುಖರ್ಜಿಯವರ ಕನಸನ್ನು ನನಸು ಮಾಡಿದೆ” ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ,ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಸೇರಿದಂತೆ ಹಿರಿಯ ಮುಖಂಡರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!