ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಮಂಗಳೂರು, ಜೂ.23: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ 2026-27ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಅರ್ಜಿದಾರರ ಪೋಷಕರ ಮಾಸಿಕ ವೇತನ ₹35,000 ಮೀರಿರಬಾರದು. ಒಂದು ಕುಟುಂಬದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಲಭ್ಯವಿರುತ್ತದೆ.

ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಸಾಮಾನ್ಯ ವರ್ಗದವರು ಕನಿಷ್ಠ ಶೇ.50 ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಶೇ.45 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ಮತ್ತೀಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು-560022 ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402 ಹಾಗೂ 9141602562 ಅನ್ನು ಸಂಪರ್ಕಿಸಬಹುದು.

SHARE
Loading spinner

Leave a Reply

Your email address will not be published. Required fields are marked *

error: Content is protected !!