ಜೂನ್ 29ರಿಂದ ವಿಶೇಷ ಸಹಕಾರ ಸಪ್ತಾಹ: ಡಿಕೆಸಿಸಿ ಬ್ಯಾಂಕ್‌ನಲ್ಲಿ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು, ಜೂ.25: ಕೇಂದ್ರ ಸಹಕಾರ ಸಚಿವಾಲಯದ ವಾರ್ಷಿಕೋತ್ಸವದ ಅಂಗವಾಗಿ ಜೂನ್ 29ರಿಂದ ಜುಲೈ 6ರವರೆಗೆ ದೇಶಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ.

ಇದರ ಅಂಗವಾಗಿ ಜೂನ್ 29ರಂದು ಬೆಳಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಕೆಸಿಸಿ ಬ್ಯಾಂಕ್) ಪ್ರಧಾನ ಕಚೇರಿಯ ಸಭಾಂಗಣದಲ್ಲಿ “ಸಹಕಾರದಿಂದ ಸಮೃದ್ಧಿ” ಧ್ಯೇಯವಾಕ್ಯದೊಂದಿಗೆ ವಿಶೇಷ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಡಿಕೆಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಶಾಸಕ ವೇದವ್ಯಾಸ ಕಾಮತ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!