ಮಣಗುಡ್ಡೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಜೂನ್ 27ರಂದು

ಮಂಗಳೂರು: 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ * ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಜೂನ್ 27ರಂದು ಶನಿವಾರ11ಗಂಟೆಗೆ ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣಗುಡ್ಡ ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸುವರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಹಾಗೂ ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಅತಿಥಿಯಾಗಿ ಭಾಗವಹಿಸುವರು. ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸುವರು. ಎಂದು ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!