ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜುಲೈ 1ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಡಂಗಾಯ ಉಪನ್ಯಾಸ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ನಡೆಯಲಿದೆ. ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


