ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್‌ನಿಂದ ಬೋಂದೆಲ್ ನಡುವಿನ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸರ್ಕಾರಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ಕೊಂಚಾಡಿ ಘಟಕದ ನೇತೃತ್ವದಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.


ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಈಗಿರುವ ಬಸ್‌ಗಳ ಸಂಖ್ಯೆ ಸಾಕಾಗುತ್ತಿಲ್ಲ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ತುರ್ತಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿವೈಎಫ್‌ಐ ಮುಖಂಡರಾದ ವೆಂಕಟೇಶ್, ರವಿಚಂದ್ರ ಕೊಂಚಾಡಿ ಹಾಗೂ ದಯಾನಂದ ಕೊಪ್ಪಲಕಾಡು ಉಪಸ್ಥಿತರಿದ್ದರು.


