ಲಯನ್ಸ್ ಡಿಸ್ಟ್ರಿಕ್ಟ್ 317ಡಿ ‘ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ವೈಭವ

ಮಂಗಳೂರು, ಜೂ. 29: ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 317ಡಿ ವತಿಯಿಂದ ಆಯೋಜಿಸಲಾದ ‘ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ಕಾರ್ಯಕ್ರಮ ಮಂಗಳೂರಿನಲ್ಲಿ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಿತು.

ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲಯನ್ಸ್ ಸದಸ್ಯರ ಸಮ್ಮುಖದಲ್ಲಿ ನಡೆದ ಸಮಾರಂಭವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಕ್ಯಾಬಿನೆಟ್ ತಂಡ ಹಾಗೂ ವಿವಿಧ ಘಟಕಗಳ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯಪಾಲರಾದ ಕುಡುಪಿ ಅರವಿಂದ್ ಶೆಣೈ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ಕ್ಯಾಬಿನೆಟ್ ಕಾರ್ಯದರ್ಶಿ ಎಚ್.ಆರ್. ಚಂದ್ರೇಗೌಡ, ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡಿಯಾರ್ (ವಿಟ್ಲ), ರಾಜ್ಯಪಾಲರ ಸಂಯೋಜಕಿ ಜ್ಯೋತಿ ಶೆಟ್ಟಿ, ಕ್ಯಾಬಿನೆಟ್ ಸಂಯೋಜಕಿ ನೆನ್ಸಿ ಮಸ್ಕರೇನಿಯಸ್, ಹೆಚ್ಚುವರಿ ಕಾರ್ಯದರ್ಶಿ ಚಂದ್ರಶೇಖರ ರೈ ಸೇರಿದಂತೆ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಮಾಜಿ ಜಿಲ್ಲಾ ರಾಜ್ಯಪಾಲರಾದ ಪ್ರಮೀಳಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ಹಿರಿಯ ಲಯನ್ಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಸಂಭ್ರಮ ಕಾರ್ಯಕ್ರಮದ ಪ್ರಧಾನ ಸಂಯೋಜಕರಾದ ಶ್ರೀನಿವಾಸ ಪೂಜಾರಿ (ಮೇಲ್ಕಾರ್) ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

ಕಾರ್ಯಕ್ರಮವನ್ನು ಕುಂಬ್ಳೆ ನರಸಿಂಹ ಪ್ರಭು ಹಾಗೂ ಸೌಜನ್ಯ ಹೆಗಡೆ ಅವರು ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!