ಮಂಗಳೂರು: ನಗರದ ಜನನಿಬಿಡ ಕೊಟ್ಟಾರ ಪ್ರದೇಶದಲ್ಲಿ ಖಾಸಗಿ ಬಸ್‌ಗೆ ಬ್ರೇಕ್ ವೈಫಲ್ಯ ಉಂಟಾದ ಘಟನೆ ನಡೆದಿದೆ.
ಬ್ರೇಕ್ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಲು ಚಾಲಕ ಸಮಯಪ್ರಜ್ಞೆ ಮೆರೆದು ಬಸ್‌ನ್ನು ಗೋಡೆಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ.
ಘಟನೆಯಲ್ಲಿ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.



