ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಮನೆ-ಮನೆಗೆ ತೆರಳಿ ನಡೆಸಲಾಗುತ್ತಿರುವ ಎಣಿಕೆ ಹಾಗೂ ನಮೂನೆ ಭರ್ತಿ ಪ್ರಕ್ರಿಯೆಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ಮಂಗಳೂರಿನ ನಿವಾಸದಲ್ಲಿ ಸೋಮವಾರ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರು ಐವನ್ ಡಿ’ಸೋಜಾ ಹಾಗೂ ಅವರ ಕುಟುಂಬ ಸದಸ್ಯರ ಎಣಿಕೆ ನಮೂನೆಗಳನ್ನು ಭರ್ತಿ ಮಾಡುವ ಮೂಲಕ ಎಸ್‌ಐಆರ್ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಿದರು.


ಕಾರ್ಯಕ್ರಮದಲ್ಲಿ ಬ್ಲಾಕ್ ಮಟ್ಟದ ಅಧಿಕಾರಿ, ಬೂತ್ ಮಟ್ಟದ ಅಧಿಕಾರಿ ಹಾಗೂ ಬೂತ್ ಮಟ್ಟದ ಏಜೆಂಟ್‌ಗಳು ಉಪಸ್ಥಿತರಿದ್ದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

