ಶೆಡ್ಡೆ ಶ್ರೀ ವಿಷ್ಣುಮೂರ್ತಿ ನೂತನ ದೇವಸ್ಥಾನಕ್ಕೆ ಜುಲೈ 2ರಂದು ಶಿಲಾನ್ಯಾಸ

ಮಂಗಳೂರು: ಶೆಡ್ಡೆಯ ಶ್ರೀ ವಿಷ್ಣುಮೂರ್ತಿ ನೂತನ ದೇವಸ್ಥಾನದ ಶಿಲಾನ್ಯಾಸ ಮಹೋತ್ಸವವು ಜುಲೈ 2ರಂದು ಗುರುವಾರ ಬೆಳಿಗ್ಗೆ 8.30ಕ್ಕೆ ಶೆಡ್ಡೆಯಲ್ಲಿ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಾಗೂ ಕೋಶಾಧಿಕಾರಿ ಎಸ್. ಶಿವರಾಮ ಮಲ್ಲಿ ಅರ್ಬಿ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡುಪು ನರಸಿಂಹ ತಂತ್ರಿ, ಕುಡುಪು ಕೃಷ್ಣರಾಜ ತಂತ್ರಿ, ಶ್ರೀನಿವಾಸ ಉಡುಪರು ಹಾಗೂ ರಾಮಚಂದ್ರ ಉಡುಪರು ಶಿಲಾನ್ಯಾಸ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದರು.

ಬಳಿಕ ಬೆಳಿಗ್ಗೆ 9.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಟೀಲು ಕ್ಷೇತ್ರದ ಅನುವಂಶಿಕ ಮೊಕೇಸ್ತರಾದ ಹರಿನಾರಾಯಣ ಅಸ್ರಣ್ಣ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಸಂಸದ ಡಾ. ಶ್ರೀಕಾಂತ್ ಏಕನಾಥ ಶಿಂಧೆ, ಮಹಾರಾಷ್ಟ್ರದ ಕಲ್ಯಾಣ ಕ್ಷೇತ್ರದ ಶಾಸಕ ರಾಜೇಶ್ ಜಿ. ಮೋರೆ, ಶಾಸಕ ಗೋಪಾಲ್ ಲ್ಯಾಂಡ್‌ಗೆ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭಾಗವಹಿಸಲಿದ್ದಾರೆ.

ಇದೇ ವೇಳೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಎ. ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಉದ್ಯಮಿ ಬರೋಡಾ ಶಶಿಧರ ಶೆಟ್ಟಿ, ಡಾ. ಎಂ. ಮೋಹನ್ ಆಳ್ವ, ಶೆಡ್ಡೆ ಮಂಜುನಾಥ ಭಂಡಾರಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ, ಪ್ರಧಾನ ಅರ್ಚಕ ರಾಮಚಂದ್ರ ಉಡುಪ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಗಿರಿಧರ ಶೆಟ್ಟಿ, ವಿಶ್ವನಾಥ ಶೆಟ್ಟಿ ಮತ್ತು ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!