ಮಂಗಳೂರು: ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೈ 4ರಂದು ಮಧ್ಯಾಹ್ನ 3 ಗಂಟೆಗೆ ಎಸ್ಸಿಡಿಸಿಸಿ ಬ್ಯಾಂಕ್ನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ.
2025–26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು.

ಮಾಜಿ ಸಚಿವ ಹಾಗೂ ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕ ಕೃಷ್ಣ ಜೆ. ಪಾಲೇಮಾರ್ ಅವರು ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ .


