ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಜನಪ್ರಿಯ ಆಧುನಿಕ ವಚನಕಾರ ಹಾಗೂ ಸುಪ್ರಸಿದ್ಧ ಸಾಹಿತಿ ಹಾಚಿ ಇಟ್ಟಿಗಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’ ಘೋಷಿಸಲಾಗಿದೆ.
ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ, ಕನ್ನಡ ನಾಡು-ನುಡಿ ಸೇವೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಹಾಚಿ ಇಟ್ಟಿಗಿ ಅವರನ್ನು ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.


