ಬಲ್ಲೂರುಗುಡ್ಡೆಯಲ್ಲಿ ಗುಡ್ಡೆ ಕುಸಿತದ ಭೀತಿ: ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಆಗ್ರಹ

ಮಂಗಳೂರು, ಜು.3: ಮಂಗಳೂರು ಮಹಾನಗರ ಪಾಲಿಕೆಯ 52ನೇ ವಾರ್ಡ್ ವ್ಯಾಪ್ತಿಯ ಬಲ್ಲೂರುಗುಡ್ಡೆ ಪ್ರದೇಶದಲ್ಲಿ ಕಳೆದ 15 ವರ್ಷಗಳಿಂದ ಗುಡ್ಡೆ ಕುಸಿತದ ಸಮಸ್ಯೆ ಮುಂದುವರಿದಿದ್ದು, ಈ ಬಾರಿಯ ಮಳೆಗಾಲದಲ್ಲಿ ಸ್ಥಳೀಯರು ಆತಂಕದ ನಡುವೆ ಜೀವನ ಸಾಗಿಸುವಂತಾಗಿದೆ.

ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಕಾರ್ಪೊರೇಟರ್ ಹಾಗೂ ಶಾಸಕರ ಗಮನಕ್ಕೆ ತಂದಿದ್ದರೂ, ಶಾಶ್ವತ ಪರಿಹಾರ ಕಾಮಗಾರಿಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಗುಡ್ಡೆ ಕುಸಿತದಿಂದ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸುವ ಮುನ್ನವೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಸ್ಥಳ ಪರಿಶೀಲನೆ ನಡೆಸಿ, ತುರ್ತು ಹಾಗೂ ಶಾಶ್ವತ ರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!