ಕೆಪಿಟಿ ಬಳಿ ಭೀಕರ ಅಪಘಾತ: ಜಮ್ಮುವಿನಲ್ಲಿ ಸೇವೆಯಲ್ಲಿದ್ದ ಸಿಐಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಸ್ಥಳದಲ್ಲೇ ಸಾವು

ಮಂಗಳೂರು | ಜು. 9: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಐಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಸೀತಾರಾಮ ಗೌಡ (47) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿರುವ ಸೀತಾರಾಮ ಗೌಡ ಅವರು ಸ್ಕೂಟರ್‌ನಲ್ಲಿ ಕೆಪಿಟಿಯಿಂದ ಕೊಟ್ಟಾರಚೌಕಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಕೂಟರ್ ಮೊದಲು ಡಿವೈಡರ್‌ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ಮತ್ತೊಂದು ವಾಹನ ಕಾರಣವೇ ಅಥವಾ ಸ್ಕೂಟರ್ ನಿಯಂತ್ರಣ ತಪ್ಪಿದ ಪರಿಣಾಮವೇ ಘಟನೆ ಸಂಭವಿಸಿತೇ ಎಂಬ ಬಗ್ಗೆ ಕದ್ರಿ ಸಂಚಾರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಸೀತಾರಾಮ ಗೌಡ ಅವರು ಜಮ್ಮು ಸೆಂಟ್ರಲ್ ಜೈಲಿನ ಸಿಐಎಸ್‌ಎಫ್ ಘಟಕದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆ ಸಂಬಂಧ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!