ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್ :-

ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿತು.

ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ ಸಹಿತ ಅನೇಕ ಬಿಜೆಪಿ ಶಾಸಕರು, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿದೆ. ಆದರೆ ಸುಳ್ಳಿನ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ ಎಂದರು. ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!