ವಿ.ಡಿ. ಸತೀಶನ್ ಅವರನ್ನು ಭೇಟಿ ಮಾಡಿ ಸ್ವಾಗತಿಸಿದ ಐವನ್ ಡಿ’ಸೋಜಾ

ಮಂಗಳೂರು:ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ ಕೇರಳ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಆತ್ಮೀಯವಾಗಿ ಭೇಟಿ ಮಾಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಉಭಯ ರಾಜ್ಯಗಳ ನಡುವಿನ ಸೌಹಾರ್ದ ಸಂಬಂಧ, ಕರಾವಳಿ ಭಾಗದ ಅಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಜನಪರ ವಿಚಾರಗಳ ಕುರಿತು ಆತ್ಮೀಯ ಮಾತುಕತೆ ನಡೆಯಿತು. ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಐವನ್ ಡಿ’ಸೋಜಾ ಅವರು ಶುಭಾಶಯಗಳನ್ನು ತಿಳಿಸಿದರು.

ಈ ಭೇಟಿಯು ಕರ್ನಾಟಕ–ಕೇರಳ ರಾಜ್ಯಗಳ ನಡುವಿನ ಉತ್ತಮ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ್ದಾಗಿದೆ ಎಂದು ಉಪಸ್ಥಿತರು ಅಭಿಪ್ರಾಯಪಟ್ಟರು.

SHARE
Loading spinner

Leave a Reply

Your email address will not be published. Required fields are marked *

error: Content is protected !!