ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಸ್ಲ್ಯಾಬ್‌ಗೆ ತೂತು ಕೊರೆದ ಕಳ್ಳರು

ಬಂಟ್ವಾಳ: ಇಲ್ಲಿನ ತಾಲೂಕಿನ ಫರಂಗಿಪೇಟೆಯ ಮಿನೇಜಸ್ ಪ್ಲಾಜಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನದ ಯತ್ನ ನಡೆದಿರುವ ಶಂಕಾಸ್ಪದ ಘಟನೆ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ಯಾಂಕ್ ಶಾಖೆಯ ಮೇಲ್ಭಾಗದಲ್ಲಿರುವ ಕೊಠಡಿಯ ಸ್ಲ್ಯಾಬ್‌ಗೆ ತೂತು (ರಂಧ್ರ) ಕೊರೆದು ಒಳಗಡೆ ನುಗ್ಗಲು ದುಷ್ಕರ್ಮಿಗಳು ಯತ್ನಿಸಿರುವುದು ಪತ್ತೆಯಾಗಿದೆ. ಆದರೆ, ಬ್ಯಾಂಕ್‌ನಿಂದ ಯಾವುದೇ ನಗದು ಅಥವಾ ಇತರೆ ಬೆಲೆಬಾಳುವ ವಸ್ತುಗಳು ಕಳವಾಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:
ವಿಷಯ ತಿಳಿಯುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಎಸ್‌.ಐ) ಮಂಜುನಾಥ್ ಅವರು ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದು, ತನಿಖೆಯ ಬಳಿಕವಷ್ಟೇ ಕಳ್ಳತನದ ಯತ್ನದ ಸಂಪೂರ್ಣ ವಿವರಗಳು ಹೊರಬರಬೇಕಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!