ಮಂಗಳೂರು:ಲಯನ್ಸ್ ಜಿಲ್ಲೆ 317ಡಿ ವತಿಯಿಂದ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾಗಿದ್ದ ಕುಡುಪಿ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ನೂತನ ಜಿಲ್ಲಾ ರಾಜ್ಯಪಾಲ ತಾರಾನಾಥ್ ಎಚ್.ಎಂ. ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಲಯನ್ಸ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಜಿಲ್ಲಾ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಸುದರ್ಶನ್ ಪಡಿಯಾರ್ (ವಿಟ್ಲ), ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳೆ ಸಬಿತಾ ತಾರಾನಾಥ್ ಉಪಸ್ಥಿತರಿದ್ದರು.


