ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಬಂಧನ……?!!!

ಮಂಗಳೂರು, ಜು.17:* ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿರುವುದಾಗಿ ತಿಳಿದುಬಂದಿದೆ.

ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ (ಕಕ್ಯಪದವು ನಿವಾಸಿ) ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್‌ನಲ್ಲಿ ಕುಳಿತಿದ್ದ ಲಾವಣ್ಯಳನ್ನು ಬಲವಂತವಾಗಿ ಕೆಳಗಿಳಿಸಿ, ಸಾರ್ವಜನಿಕರ ಎದುರೇ ತಲ್ವಾರ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದು ಆರೋಪಿ ಪರಾರಿಯಾಗಿದ್ದ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು.

ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ವಿವಿಧ ತಂಡಗಳನ್ನು ರಚಿಸಿ ಶೋಧ ನಡೆಸಿ ಆರೋಪಿ ಚೇತನ್‌ನನ್ನು ಮಂಗಳೂರು ಸಮೀಪ ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!