ಭೂಕುಸಿತ ಸಾಧ್ಯತೆ: ಜುಲೈ 17-18ರಂದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ

ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಮತ್ತು 18ರಂದು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಗುಡ್ಡ ಪ್ರದೇಶಗಳಲ್ಲಿ ವಾಸಿಸುವವರು, ರಸ್ತೆ ಸಂಚಾರ ನಡೆಸುವವರು ಹಾಗೂ ನದಿ, ಹೊಳೆಗಳ ಸಮೀಪ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.ಭೂಕುಸಿತದ ಲಕ್ಷಣಗಳು ಕಂಡುಬಂದರೆ ಅಥವಾ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಥಳೀಯ ಆಡಳಿತ ಅಥವಾ ವಿಪತ್ತು ನಿರ್ವಹಣಾ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಭಾರೀ ಮಳೆಯ ಅವಧಿಯಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ನೀಡುವ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!