ಮಂಗಳೂರು, ಜು. 18: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ವತಿಯಿಂದ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜುಲೈ 21ರಂದು ಬೆಳಿಗ್ಗೆ 10.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಾವೂರು ಬಂಟರ ಸಂಘದ ಅಧ್ಯಕ್ಷ ಶ್ರೀ ಆನಂದ ಶೆಟ್ಟಿ ಅಡ್ಯಾರ್ ಉದ್ಘಾಟಿಸಲಿದ್ದು, ಕರ್ನಾಟಕ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.

ಸಮಾಜ ಸೇವಕಿ ಲಯನ್ ಆಶಾ ರಾವ್ ಆರೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಅಮೃತ ಪ್ರಕಾಶ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

