ಕೌಶಲ್ಯ ತರಬೇತಿ ಕಾರ್ಯಾಗಾರ ಆಗಸ್ಟ್ 12 ರಂದು

ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ಜಾಬ್’ರೋಲ್’ಗಳಲ್ಲಿ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರವನ್ನು ಆಗಸ್ಟ್ 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿಯಲ್ಲಿ ಆಯೋಜಿಸಲಾಗಿದೆ.


18 ರಿಂದ 50 ವರ್ಷ ವಯಸ್ಸಿನವರು ಈ ತರಬೇತಿಗೆ ಹಾಜರಾಗಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ 0824-2453222 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.:

SHARE
Loading spinner

Leave a Reply

Your email address will not be published. Required fields are marked *

error: Content is protected !!