ಬಂಟ್ವಾಳ: ಉದ್ಯೋಗಾಕಾಂಕ್ಷಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ‘ವಿಕಸಿತ ಬಂಟ್ವಾಳ’ ವತಿಯಿಂದ ಬೃಹತ್ ಉದ್ಯೋಗ ಮೇಳ ಮಾಹಿತ ಶಿಬಿರ ಆಯೋಜಿಸಲಾಗಿದೆ.
ಜುಲೈ 31 (ಶುಕ್ರವಾರ) ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ ಆಕರ್ಷಕ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸ್ಥಳದಲ್ಲೇ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುತ್ತದೆ.

ಆಗಸ್ಟ್ 7 ಮತ್ತು 8ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದ ಸಂಪೂರ್ಣ ಮಾಹಿತಿ ನೀಡುಲಾಗುವುದು.
ಬಂಟ್ವಾಳ ಹಾಗೂ ಸುತ್ತಮುತ್ತಲಿನ ಪದವೀಧರರು, ಡಿಪ್ಲೊಮಾ, ಐಟಿಐ, ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ ಯುವಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ರೆಸ್ಯೂಮ್ ತಯಾರಿಕೆ ಕುರಿತು ಮಾರ್ಗದರ್ಶನ, ವೃತ್ತಿ ಸಲಹೆ (Career Guidance), ಸಂದರ್ಶನಕ್ಕೆ ಅಗತ್ಯವಾದ ತರಬೇತಿ ಹಾಗೂ ಉದ್ಯೋಗಾವಕಾಶಗಳ ಮಾಹಿತಿ ನೀಡಲಾಗುತ್ತದೆ. ವಿವಿಧ ಕಂಪನಿಗಳ ಮಾನವ ಸಂಪನ್ಮೂಲ (HR) ಪ್ರತಿನಿಧಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಭಾಗದ ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರಕಿಸುವ ಪ್ರಯತ್ನಕ್ಕೆ ಮತ್ತೊಂದು ವೇದಿಕೆ ಸಿಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 94492 10250 ಹಾಗೂ 79752 23865 ಸಂಪರ್ಕಿಸಬಹುದು.


