ನೀಟ್ ನ್ಯಾಯಕ್ಕಾಗಿ ಉಳ್ಳಾಲದಲ್ಲಿ ಸಾವಿರಾರು ವಿದ್ಯಾರ್ಥಿಗಳ ಮೇಣದಬತ್ತಿ ಮೆರವಣಿಗೆ

ಉಳ್ಳಾಲ, ಜು. 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ‘ವಿ ದಿ ಪೀಪಲ್ ಆಫ್ ಇಂಡಿಯಾ–ಉಳ್ಳಾಲ’ ಹಾಗೂ ‘ಜೆನ್ Z ಆಫ್ ಉಳ್ಳಾಲ’ ಸಂಘಟನೆಗಳ ನೇತೃತ್ವದಲ್ಲಿ ಉಳ್ಳಾಲದಲ್ಲಿ ಬೃಹತ್ ಶಾಂತಿಯುತ ಮೇಣದಬತ್ತಿ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿದ್ಯಾರ್ಥಿಗಳ ಹಕ್ಕು ಮತ್ತು ನ್ಯಾಯದ ಪರವಾಗಿ ಐಕ್ಯತೆ ಪ್ರದರ್ಶಿಸಿದರು. ಕೈಯಲ್ಲಿ ಮೇಣದಬತ್ತಿ ಹಿಡಿದು ಶಾಂತಿಯುತವಾಗಿ ಸಾಗಿದ ಪ್ರತಿಭಟನೆ ವಿದ್ಯಾರ್ಥಿಗಳ ಧ್ವನಿಯನ್ನು ಸಮಾಜದ ಗಮನಕ್ಕೆ ತರುವ ಪ್ರಯತ್ನವಾಗಿತ್ತು.

ಆಯೋಜಕರು ಮಾತನಾಡಿ, ಈ ಹೋರಾಟ ಉಳ್ಳಾಲಕ್ಕೆ ಮಾತ್ರ ಸೀಮಿತವಾಗದೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಕ್ಕು, ನ್ಯಾಯ ಹಾಗೂ ಶಿಕ್ಷಣದ ಭವಿಷ್ಯಕ್ಕಾಗಿ ಶಾಂತಿಯುತ ಜನಾಂದೋಲನವಾಗಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!