ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಗುರುತಿಸಿ ಪತ್ರಕರ್ತ ಗಿರೀಶ್ ಪಿಎಂ ಅವರಿಗೆ “ಕನ್ನಡ ಪಯಸ್ವಿನಿ ಮಾಧ್ಯಮ ರತ್ನ ಪ್ರಶಸ್ತಿ-2026” ಪ್ರದಾನ ಮಾಡಲಾಯಿತು.

ಕನ್ನಡ ಭವನ ಮತ್ತು ಗ್ರಂಥಾಲಯದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಡಾ. ಬಾಲಕೃಷ್ಣ ಎಸ್. ಮದ್ದೋಡಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಗಿರೀಶ್ ಪಿಎಂ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಿರೀಶ್ ಪಿಎಂ ಅವರು ಕಳೆದ 5 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಕನ್ನಡದ ಪ್ರಮುಖ ದಿನಪತ್ರಿಕೆಗಳಿಗೆ ಹಲವು ಲೇಖನಗಳನ್ನು ನೀಡಿದ್ದಾರೆ. ಪ್ರಸ್ತುತ ಅವರು ಅಭಿಮತ ವಾಹಿನಿಯ ಮಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಅವರ ನಿಷ್ಠೆ, ಬದ್ಧತೆ ಹಾಗೂ ಸಮಾಜಮುಖಿ ವರದಿಗಾರಿಕೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


