ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು ಗುರು ಪೂರ್ಣಿಮೆ; ಲಕ್ಷ ತುಳಸಿ ಅರ್ಚನೆ, ವಿಶ್ವಶಾಂತಿ ಹೋಮ

ಮಂಗಳೂರು: ಶ್ರೀ ಕ್ಷೇತ್ರ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು (ಜುಲೈ 29) ಗುರು ಪೂರ್ಣಿಮೆ ಅಂಗವಾಗಿ ಲೋಕಕಲ್ಯಾಣಾರ್ಥ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇಂದು ಬೆಳಗ್ಗೆ 9 ಗಂಟೆಗೆ ಗುರು ಪ್ರಾರ್ಥನೆ, 9.15ಕ್ಕೆ ವಿಶ್ವಶಾಂತಿ ಹೋಮ, 10 ಗಂಟೆಗೆ ಲಕ್ಷ ತುಳಸಿ ಅರ್ಚನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ.

ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗುವ ಉದ್ದೇಶದಿಂದ ಭಕ್ತರು ಸಪರಿವಾರ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಆಹ್ವಾನಿಸಿದೆ.

ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!