ಬಂಟ್ವಾಳ : ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯಿಂದ ಜಯ ಸಪಲ್ಯ ಅವರ ಮನೆಯ ಛಾವಣಿ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿದ ಶಾಸಕರು, ಸಂಭವಿಸಿದ ಹಾನಿಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸರ್ಕಾರದ ನಿಯಮಾನುಸಾರ ತುರ್ತು ಪರಿಹಾರ ಹಾಗೂ ಅಗತ್ಯ ನೆರವನ್ನು ಶೀಘ್ರವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ (VA) ಮಲ್ಲಿಕಾರ್ಜುನ್, ಪಿಡಿಒ ರಶ್ಮಿ ಆರ್. ಕಿಲ್ಲೆ, ಕಂದಾಯ ಇಲಾಖೆಯ ಅಧಿಕಾರಿ ರಿಟಾ ಡಿ’ಸೋಜಾ, ಮಾಜಿ ಪಂಚಾಯತ್ ಸದಸ್ಯ ರಘುವೀರ್ ಆಚಾರ್ಯ, ಸುಂದರ್, ರಾಮಚಂದ್ರ, ತಿರುಲೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


