ಮಂಗಳೂರು: ಧಾರಾಕಾರ ಮಳೆಯ ನಡುವೆ ಮಂಗಳೂರು–ಕಾಸರಗೋಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದ ಬಂದಿಯೊಡ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಜುಲೈ ೨೦ ರಂದು ಘಟನೆ ನಡೆದಿದ್ದು ಘಟನೆಯಾ ದೃಶ್ಯ ಭೀಕರತೆಯನ್ನು ತಿಳಿಸುತ್ತದೆ.

ಮಳೆಯ ಕಾರಣ ರಸ್ತೆ ಜಾರುವಂತಾಗಿದ್ದ ಹಿನ್ನೆಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ನಿಧಾನವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಬಸ್ನಲ್ಲಿ ಪ್ರಯಾಣಿಕರಿದ್ದರೂ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ.

ಘಟನೆಯಿಂದ ಕೆಲಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಅಪಘಾತದಲ್ಲಿ ಯಾರಿಗೂ ಅಪಾಯವಾಗದ ಕಾರಣ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.

ಅಪಘಾತದ ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ನಿಧಾನಗೊಂಡಿದ್ದು, ಬಳಿಕ ಸಂಚಾರವನ್ನು ಸುಗಮಗೊಳಿಸಲಾಯಿತು.

