ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದಿನಾಂಕ: 23.06.2025 ರಂದು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ : 79/2025, ಕಲಂ: 11, 12 ಪೋಕ್ಸೋ ಆಕ್ಟ್ -2012 & ಕಲಂ : 75(i) (ii), 79 BNS-2023 ಪ್ರಕರಣದಲ್ಲಿ, ತನಿಖೆ ನಡೆಸಿದ ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಕೀರಪ್ಪ ಘಟಕಾಂಬಳೆ, ಪಿಎಸ್ಐ ರವರು ಹಾಗೂ ಕೃಷ್ಣಕಾಂತ ಪಾಟೀಲ್ ಪಿ.ಎಸ್.ಐ ರವರು, ಪ್ರಕರಣದ ಆರೋಪಿತನಾದ ಮಣಿನಾಲ್ಕೂರು ನಿವಾಸಿ ಮೋನಪ್ಪ ನಾಯ್ಕ (52) ಎಂಬಾತನ ವಿರುದ್ಧ ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ, ಮಾನ್ಯ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಮಾನ್ಯ FTSC-I, ಮಂಗಳೂರು ನ್ಯಾಯಾಲಯದಲ್ಲಿ, ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಮೋಹನ್‌ ಜೆ.ಎಸ್ ರವರು ಆರೋಪಿಗೆ ದಿನಾಂಕ 31.07.2026 ರಂದು

  • U/S 74 r/w 62 BNS act ಗೆ 2 ವರ್ಷ 6 ತಿಂಗಳು ಶಿಕ್ಷೆ ಮತ್ತು 15 ಸಾವಿರ ದಂಡ
  • U/S 75 (2) (3) r/w 62 BNS act ಗೆ 1 ವರ್ಷ ಶಿಕ್ಷೆ ಮತ್ತು 10 ಸಾವಿರ ದಂಡ
  • U/S 79/BNS act ಗೆ 1 ವರ್ಷ ಶಿಕ್ಷೆ ಮತ್ತು 5000 ದಂಡ
  • U/S 12 r/w 18 pocso act-2012 ಗೆ 1ವರ್ಷ ಶಿಕ್ಷೆ ಮತ್ತು 10 ಸಾವಿರ ದಂಡ.
  • CONCURRENTLY =2 ವರ್ಷ 6 ತಿಂಗಳ ಶಿಕ್ಷೆ ಮತ್ತು ರೂ 40,000 ದಂಡದ ಶಿಕ್ಷೆ ವಿಧಿಸಿ ಅದೇಶಿಸಿರುತ್ತದೆ.

ಸರ್ಕಾರಿ ಅಭಿಯೋಜಿಕರಾದ ಸಹನಾದೇವಿ ರವರು ಮಾನ್ಯ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದಿಸಿರುತ್ತಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!