ರೋಟರಿ ಕ್ಲಬ್ ನಿಟ್ಟೆ, ವಲಯ–5, ರೋಟರಿ ಜಿಲ್ಲೆ–3182 ವತಿಯಿಂದ ಸಮಾಜಸೇವಾ ಕಾರ್ಯಕ್ರಮದ ಅಂಗವಾಗಿ ನಿಟ್ಟೆ ಮತ್ತು ಕೆಮ್ಮಣ್ಣು ಅಂಗನವಾಡಿ ಕೇಂದ್ರಗಳಿಗೆ ಕಪಾಟುಗಳನ್ನು (Cupboards) 2026ರ ಆಗಸ್ಟ್ 1ರಂದು ವಿತರಿಸಲಾಯಿತು. ಈ ಕಪಾಟುಗಳನ್ನು ಶೈಕ್ಷಣಿಕ ಸಾಮಗ್ರಿಗಳು, ಆಟಿಕೆಗಳು, ದಾಖಲೆಗಳು ಹಾಗೂ ಮಕ್ಕಳಿಗೆ ಅಗತ್ಯವಿರುವ ಇತರ ವಸ್ತುಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಒದಗಿಸಲಾಯಿತು.


ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೊಟೇರಿಯನ್ ಶ್ರೀಮತಿ ಶೈಲಜಾ ವಿ. ಶೆಟ್ಟಿ ಮಾತನಾಡಿ, ಬಾಲ್ಯದಲ್ಲಿಯೇ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸುವಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅಂಗನವಾಡಿಗಳ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ಕಪಾಟುಗಳನ್ನು ನೀಡಲಾಗಿದೆ ಎಂದು ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯರು ರೋಟರಿ ಕ್ಲಬ್ ನಿಟ್ಟೆಯ ಈ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು


