ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ: ರಾಷ್ಟ್ರೀಯ ಹೆದ್ದಾರಿಯಲ್ಲೇ ಕೃತಕ ನೆರೆ, ಜನಜೀವನ ಅಸ್ತವ್ಯಸ್ತ

ಸೋಮವಾರ ಬೆಳಗ್ಗೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಪರಿಣಾಮ ರಸ್ತೆಗಳು ಜಲಾವೃತಗೊಂಡಿದ್ದು, ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ಕೃತಕ ನೆರೆ ನಿರ್ಮಾಣವಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮರಗಳು ನೆಲಕ್ಕುರುಳಿದ್ದು, ಕೆಲವೆಡೆ ವಿದ್ಯುತ್ ತಂತಿಗಳ ಮೇಲೂ ಮರಗಳು ಬಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ಪ್ರದೇಶಗಳಲ್ಲಿ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ಕಾರ್ಯನಿರತರಾಗಿದ್ದಾರೆ.

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ಘೋಷಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ತಗ್ಗು ಪ್ರದೇಶಗಳು, ನದಿ ತೀರಗಳು ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಿದೆ.

ಅಲ್ಲದೆ, ಸಮುದ್ರ ಪ್ರಕ್ಷುಬ್ಧವಾಗಿರುವ ಕಾರಣ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!