ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಜನ್ಮದಿನಾಚರಣೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಜನ್ಮದಿನಾಚರಣೆ ಇಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಎಸ್‌ಸಿಡಿಸಿಸಿ ಬ್ಯಾಂಕ್ನಲ್ಲಿ ನಡೆಯಲಿದೆ .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ದಿ / ಮೊಳಹಳ್ಳಿ ಶಿವರಾವ್ ಅವರ ಕುರಿತಾದ “ಆಕರ ಗ್ರಂಥ”ವನ್ನು ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಸೇರಿದಂತೆ ಬ್ಯಾಂಕಿನ ನಿರ್ದೇಶಕ ಮಂಡಳಿ ಹಾಗೂ ಸಹಕಾರಿ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.ಸಹಕಾರಿ ಕ್ಷೇತ್ರದ ಮುಖಂಡರು, ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಆಹ್ವಾನಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!