ಮಂಗಳೂರು ನಗರದ ಬಾರ್‌ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್‌ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕಾರ್ಯಾಚರಣೆ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಯಿತು. ಅಪ್ರಾಪ್ತ ವಯಸ್ಕರಿಗೆ ಯಾವುದೇ ಕಾರಣಕ್ಕೂ ಮದ್ಯ ಪೂರೈಸಬಾರದು ಎಂದು ಬಾರ್‌ಗಳ ಸನ್ನದುದಾರರಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸಿರುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಎಚ್ಚರಿಕೆ ನೀಡಿದೆ.

ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಂತೆ ನಡೆದ ಕಾರ್ಯಾಚರಣೆಗೆ ಮಂಗಳೂರು ಉಪವಿಭಾಗ–1ರ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್. ನೇತೃತ್ವ ವಹಿಸಿದ್ದರು.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್ ಹಾಗೂ ಜಯಪ್ಪ ಸೇರಿದಂತೆ ಸಿಬ್ಬಂದಿಗಳಾದ ಸಂದೀಪ್, ಸಂಧ್ಯಾ, ಶಿವಲಿಂಗಪ್ಪ, ಆನಂದ್, ಮಂಜಪ್ಪ ಮತ್ತು ದೇವರಾಜ್ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!