ತ್ರಿಷಾ ದಿನ ಆಚರಣೆ ಆ.10ರಂದು; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ಮಂಗಳೂರು, ಸಿದ್ಧಾಂತ ಫೌಂಡೇಶನ್ ವತಿಯಿಂದ ತ್ರಿಷಾ ಶಿಕ್ಷಣ ಸಂಸ್ಥೆಗಳ ಉನ್ನತ ಶಿಕ್ಷಣ ಹಾಗೂ ಶೈಕ್ಷಣಿಕ ಶ್ರೇಷ್ಠತೆಯ 28 ವರ್ಷಗಳ ಸೇವೆಯನ್ನು ಸ್ಮರಿಸುವ ಅಂಗವಾಗಿ ‘ತ್ರಿಷಾ ದಿನ ಆಚರಣೆ’ ಕಾರ್ಯಕ್ರಮವನ್ನು ಆ.10ರಂದು ಬೆಳಗ್ಗೆ 9 ಗಂಟೆಯಿಂದ ಮಂಗಳೂರಿನ ಬಲ್ಮಠದ ಡಾನ್ ಬಾಸ್ಕೋ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ನಾರಾಯಣ ಕಾಯರ್‌ಕಟ್ಟೆ, ತ್ರಿಷಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಿಕ್ಷಣ, ವೈದ್ಯಕೀಯ, ನೃತ್ಯ, ನಾಟಕ ಹಾಗೂ ವಾಣಿಜ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಸಾಧಕರು ತಮ್ಮ ಅನುಭವ ಮತ್ತು ಸಾಧನೆಯ ಪಯಣವನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ಹೇಳಿದರು.

ಹಗಲು ಕಾಲೇಜಿನ ಪ್ರಾಂಶುಪಾಲ ಪ್ರೊ. ಮಂಜುನಾಥ ಕಾಮತ್ ಮಾತನಾಡಿ, ಡಾ. ಮಧುಸೂದನ್ ಲಾಡ್, ಡಾ. ದೇವರಾಜ್ ಕೆ., ಶ್ರೀಮಾ ಪ್ರಿಯದರ್ಶಿನಿ, ಮೈತ್ರೇಯ, ವಿಕ್ರಮ್ ದತ್ತ, ರಾಕೇಶ್ ರೈ ಅಡ್ಕ, ಸಿಎ ಶಾಂತಾರಾಮ ಶೆಟ್ಟಿ, ರೂಪಾಶ್ರೀ ವರ್ಕಾಡಿ ಹಾಗೂ ಮಾರುತಿ ಜನಸೇವಾ ಸಂಘದ ಮುಖ್ಯಸ್ಥರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸುಪ್ರಭಾ ಹಾಗೂ ಮಾಧ್ಯಮ ಸಂಚಾಲಕ ಪ್ರಭಾಕರ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!