ವಿಮಾನ ನಿಲ್ದಾಣದ ಸಮಸ್ಯೆ ಖಂಡಿಸಿ ಬಜ್ಪೆ ಪಂಚಾಯತ್‌ನ 19 ಕೌನ್ಸಿಲರ್‌ಗಳ ಪ್ರತಿಭಟನೆ

ಮಂಗಳೂರು: ಬಜ್ಪೆಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದೆ ಎಂದು ಆರೋಪಿಸಿ ಬಜ್ಪೆ ಪಟ್ಟಣ ಪಂಚಾಯತ್ ಎಲ್ಲಾ 19 ಕೌನ್ಸಿಲರ್ ಗಳು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ವಿಮಾನ ನಿಲ್ದಾಣ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಹೊರಹಾಕಿ ಆಕ್ರೋಶ ಹೊರಹಾಕಿದರು. ಇಲ್ಲಿನ ರಾಜಕಾಲುವೆಗಳಲ್ಲಿ ಹೂಳು ತುಂಬಿದ್ದು, ತಡೆಗೋಡೆ ಕುಸಿದು ಮಳೆಕಾಲದ ವೇಳೆ ಹಲವು ಸಮಸ್ಯೆಗಳು ಉಂಟಾಗುತ್ತಿವೆ. ಇದರಿಂದ ಮರವೂರು ಹಾಗೂ ಕೆಂಜಾರು ಭಾಗದಲ್ಲಿ ಕೂಡ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ವಿಮಾನ ನಿಲ್ದಾಣ ಹಾಗೂ ಜಿಲ್ಲಾಡಳಿತಕ್ಕೆ ಮನವಿ ನೀಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಕೌನ್ಸಿಲರ್ ಗಳು ಆರೋಪಿಸಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯ ನಾಗರಿಕರು, ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.’

SHARE
Loading spinner

Leave a Reply

Your email address will not be published. Required fields are marked *

error: Content is protected !!