ಮಂಗಳೂರಿನಲ್ಲಿ ಇಂದು ತಿರಂಗ ಯಾತ್ರೆ

ಮಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ನಗರ ದಕ್ಷಿಣ ವತಿಯಿಂದ ಇಂದು (ಆಗಸ್ಟ್ 12) ತಿರಂಗ ಯಾತ್ರೆ ಆಯೋಜಿಸಲಾಗಿದೆ.

ಮಧ್ಯಾಹ್ನ 2.30ಕ್ಕೆ ಕುದ್ಮಲ್ ರಂಗರಾವ್ ಪುರಭವನ (ಟೌನ್ ಹಾಲ್) ಎದುರಿನ ರಾಜಾಜಿ ಪಾರ್ಕ್‌ನಿಂದ ತಿರಂಗ ಯಾತ್ರೆ ಆರಂಭವಾಗಲಿದ್ದು, ಕೊಡಿಯಾಲ್‌ಬೈಲ್‌ನಲ್ಲಿರುವ ಗೋವಿಂದ ಪೈ ವೃತ್ತದ ಬಳಿ ಸಮಾಪನಗೊಳ್ಳಲಿದೆ.

ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಕುಟುಂಬದ ಸದಸ್ಯರೊಂದಿಗೆ ತಿರಂಗ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಆಚರಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಗುಣವನ್ನು ಬೆಳೆಸುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!