ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು.


ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ. ಅದೇ ರೀತಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ 94C ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳೂ ಹಲವು ಕಡೆಗಳಲ್ಲಿ ಬಾಕಿ ಉಳಿದಿದ್ದು, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಅಗತ್ಯ ದಾಖಲೆಗಳ ಪ್ರಕ್ರಿಯೆ ವಿಳಂಬವಾಗುತ್ತಿದೆ.


ಆದ್ದರಿಂದ ಅಕ್ರಮ–ಸಕ್ರಮ ಮತ್ತು 94C ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹ ಅರ್ಜಿದಾರರ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ವಿಲೇವಾರಿ ಮಾಡುವಂತೆ ತಹಶೀಲ್ದಾರ್‌ರಿಗೆ ಮನವಿ ಮಾಡಲಾಯಿತು.


ಇದರೊಂದಿಗೆ, ಕುಟುಂಬದ ಸದಸ್ಯರ ನಿಧನದ ನಂತರ ಜಮೀನು ಹಾಗೂ ಆಸ್ತಿಗಳ ಪೌತಿ ಖಾತೆ ಮಾಡಿಸಿಕೊಳ್ಳಲು ಸಾರ್ವಜನಿಕರು ಎದುರಿಸುತ್ತಿರುವ ವಿಳಂಬ ಮತ್ತು ಕಚೇರಿ ಮಟ್ಟದ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯಲಾಯಿತು. ಅರ್ಹ ಪ್ರಕರಣಗಳಲ್ಲಿ ಪೌತಿ ಖಾತೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!