ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನಲ್ಲಿ ಕಾಲೇಜಿನಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು:ನಗರದ ಪ್ರತಿಷ್ಠಿತ ಯುನಿವರ್ಸಿಟಿ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಗುವುದು.

ಆ.15ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯವಂತ ನಾಯಕ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ನಿವೃತ್ತ ಭಾರತೀಯ ಸೇನೆಯ ಕರ್ನಲ್ ಮನೋಜ್ ಆರ್. ಅವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎನ್‌ಸಿಸಿ ಆರ್ಮಿ ವಿಭಾಗದ ಎಎನ್‌ಒ *ಮೇಜರ್ ಡಾ. ಜಯರಾಜ್ ಎನ್., ದೈಹಿಕ ಶಿಕ್ಷಣ ವಿಭಾಗದ **ಡಾ. ಹರಿದಾಸ ಕೂಳೂರು, ಎನ್‌ಸಿಸಿ ನೌಕಾ ವಿಭಾಗದ ಎಎನ್‌ಒ *ಲೆಫ್ಟಿನೆಂಟ್ ಕಮಾಂಡರ್ ಪ್ರೊ. ಯತೀಶ್ ಕುಮಾರ್ ಹಾಗೂ ಎನ್‌ಎಸ್‌ಎಸ್ ಅಧಿಕಾರಿ ಡಾ. ಸುರೇಶ್ ಉಪಸ್ಥಿತರಿರುವರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!